ರೈಲ್ವೆ ಸಚಿವರ ಭೇಟಿಯಾದ ಸಂಸದ ಕೋಟ ; ಕರಾವಳಿ, ಮಲೆನಾಡಿಗೆ ರೈಲ್ವೆ ಯೋಜನೆ, ಭಾರತೀಯ ರೈಲ್ವೆಯೊಳಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒತ್ತಾಯ

ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ರೈಲು ಸಂಚಾರ ವ್ಯವಸ್ಥೆ ಸುಧಾರಣೆ ಮತ್ತು ಹೊಸ ರೈಲು ಒದಗಿಸಬೇಕು ಎಂದು ಕೋರಿ ಮನವಿ ಸಲ್ಲಿಸಿದರು.
ಬಹುದಿನದ ಬೇಡಿಕೆಯಾದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಳಗೆ ವಿಲೀನ ಮಾಡಬೇಕೆಂದು ಒತ್ತಾಯಿಸಿ ಮನವಿ ನೀಡಿದರು. ಕೊಂಕಣ ರೈಲ್ವೆಯು ಭಾರತೀಯ ರೈಲ್ವೆಯಲ್ಲಿ ವಿಲೀನವಾದರೆ ಮಾತ್ರ ಈಗಿರುವ ಹಳಿಗಳ ಮೇಲ್ದರ್ಜೆಗೆ ಏರಿಸುವುದು ಮತ್ತು ಹೆಚ್ಚುವರಿ ಬೋಗಿಗಳ ಜೋಡಣೆ ಸಾಧ್ಯವಾಗುತ್ತದೆ. ಅಲ್ಲದೆ, ಈಗಿರುವ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಹಾಗೂ ಹೊಸ ರೈಲುಗಳ ಸಂಚಾರಕ್ಕೂ ಅನುಕೂಲವಾಗಲಿದೆ ಎಂಬ ಸಂಸದ ಶ್ರೀನಿವಾಸ ಪೂಜಾರಿ ವಿವರಿಸಿದ್ದಾರೆ.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರು ಎಲ್ಲ ವಿಚಾರಗಳಿಗೆ ಸಹಮತ ವ್ಯಕ್ತಪಡಿಸಿದ್ದು, ಕೊಂಕಣ ರೈಲ್ವೆ ವಿಲೀನದ ಬಗ್ಗೆ ಕೂಡಲೇ ಇದಕ್ಕೆ ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಂದ ವರದಿ ತರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸದ್ಯ ಸಂಚಾರ ಮಾಡುತ್ತಿರುವ ಪಂಚಗಂಗಾ ರೈಲಿನ ಬಳಕೆದಾರರನ್ನು ಹೊರತುಪಡಿಸಿ ತಡರಾತ್ರಿ ಉಡುಪಿ, ಕುಂದಾಪುರ, ಕಾರವಾರ ಕಡೆ ಪ್ರಯಾಣ ಬೆಳೆಸುವ ಅಸಂಖ್ಯಾತ ರೈಲು ಬಳಕೆದಾರರಿಗಾಗಿ ಪಡೀಲ್ ಬೈಪಾಸ್ ಮೂಲಕ ಬೆಂಗಳೂರು-ಕಾರವಾರ ನಡುವೆ ಹೊಸ ರೈಲು ಸೇವೆ ಒದಗಿಸಲು ಮನವಿ ಮಾಡಿದರು. ಎರ್ನಾಕುಲಂ-ನಿಜಾಮುದ್ದೀನ್ ರೈಲನ್ನು ಕುಂದಾಪುರದಲ್ಲಿ ನಿಲ್ಲಿಸುವಂತೆ ಕೊಟ್ಟ ಮನವಿಗೆ ಸಚಿವರು ಒಪ್ಪಿಗೆ ನೀಡಿದ್ದಾರೆ. ಮತ್ಸ್ಯಗಂಧ ರೈಲಿನ ಬೋಗಿಗಳು ಅತ್ಯಂತ ಹಳೆಯದಾದ ಐಸಿಎಫ್ ಮಾದರಿಯದಾಗಿದ್ದು ತಕ್ಷಣವೇ ಅದನ್ನು ಆಧುನಿಕ ಎಲ್ ಎಚ್‌ಪಿ ಕೋಚ್‌ಗಳಾಗಿ ಮೇಲ್ದರ್ಜೆಗೆ ಏರಿಸಲು ಕೋರಿದರು.

ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement