ವ್ಯಾಪಕ ಮಳೆ : 1 ತಾಲೂಕು ಹೊರತುಪಡಿಸಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲೆ-ಪಿಯು ಕಾಲೇಜುಗಳಿಗೆ ನಾಳೆ (ಜುಲೈ 27) ರಜೆ ಘೋಷಣೆ

ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ(ಜುಲೈ 27) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಮಳೆಯ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿದೆ. ಮುಂಬರುವ ದಿನಗಳಲ್ಲಿ ಸದರಿ ರಜೆಯನ್ನು ಸರಿದೂಗಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement