ಬೆಳಗಾವಿ ಜಿಲ್ಲೆಯ 2 ತಾಲೂಕಿನ‌ ಶಾಲೆಗಳಿಗೆ, ಕೆಲ ತಾಲೂಕಿನ ಆಯ್ದ ಗ್ರಾಮಗಳ ಶಾಲೆಗಳಿಗೆ ಜುಲೈ 29-30 ರಂದು ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗೋಕಾಕ‌ ಮತ್ತು ಮೂಡಲಗಿ ತಾಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು, ಎಲ್ಲ‌ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ (ಜುಲೈ 29) ಹಾಗೂ ಮಂಗಳವಾರ (ಜುಲೈ 30) ರಜೆ‌ ಘೋಷಿಸಲಾಗಿದೆ.
ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು, ಹುಕ್ಕೇರಿ ತಾಲೂಕಿನ ಸಂಕೇಶ್ವರ, ಹೊಸೂರ‌ ಮತ್ತು‌ ಬಡಕುಂದ್ರಿ ಗ್ರಾಮಗಳು, ಕಾಗವಾಡ ತಾಲೂಕಿನ ಜೂಗೂಳ, ಶಾಪುರ, ಮಂಗಾವತಿ, ಕೃಷ್ಣಾ ಕಿತ್ತೂರ, ಕಾತ್ರಾಳ ಮತ್ತು‌ ಬನಜವಾಡ ಗ್ರಾಮಗಳು, ಚಿಕ್ಕೋಡಿ ತಾಲೂಕಿನ ಇಂಗಳಿ, ಜನವಾಡ, ಕಲ್ಲೋಳ ಹಾಗೂ ಅಂಕಲಿ ಗ್ರಾಮಗಳ ಶಾಲೆಗಳಿಗೆ ಮಾತ್ರ ಜುಲೈ 29 ಮತ್ತು ಜುಲೈ 30 ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement