ಬೈಲಹೊಂಗಲ : ಮಲಪ್ರಭಾ ನದಿ ತೀರದಲ್ಲಿ ಕಾಣಿಸಿಕೊಂಡ ಬೃಹತ್‌ ಮೊಸಳೆ

ಯಡೂರು ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಸಮೀಪದ ಮಾಟೊಳ್ಳಿ, ಲಿಂಗದಳ್ಳಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿ ಇದೀಗ ಬೃಹತ್ ಗಾತ್ರದ ಮೊಸಳೆ ಕಂಡು ಬಂದಿದೆ. ಇದರಿಂದ ನದಿತೀರದ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಬೆಳಗಾವಿ (Belagavi) ಜಿಲ್ಲೆಯ ಸಪ್ತ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರೊಟ್ಟಿಗೆ ಮೊಸಳೆಗಳು ಬರುತ್ತಿವೆ. ಸುಮಾರು 10 ಅಡಿ ಉದ್ದದ ಮೊಸಳೆ ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಆ ನದಿ ತಟದ ಜನ ಈಗ ನದಿ ಬಳಿ ಹೋಗಲು ಭಯಪಡುವಂತಾಗಿದೆ. ಈ ಬಗ್ಗೆ ತಾಲೂಕು ಆಡಳಿತ ನದಿ ತಟದ ಜನರು ನದಿಗೆ ಇಳಿಯಬಾರದು. ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದೆ.
ನಾಗರಿಕರು ಸಹಾ ಈಗ ಮಲಪ್ರಭೆಯಲ್ಲಿ ಕಂಡುಬಂದಿರುವ ಮೊಸಳೆಗಳನ್ನು ಹಿಡಿಯಲು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಯಡೂರು ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಲಾವೃತ….
ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನ ಭಾನುವಾರ ಜಲಾವೃತಗೊಂಡಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ, ಇದರಿಂದ ಕೃಷ್ಣಾ ನದಿ ತೀರದಲ್ಲಿ ಈ ವರ್ಷ ಭಾರಿ ನೀರು ಹರಿಯುತ್ತಿದೆ. ಇದರ ಪರಿಣಾಮ ಯಡೂರಿನ ಪ್ರಸಿದ್ಧ ಶ್ರೀ ವೀರಭದ್ರ ದೇವಸ್ಥಾನಕ್ಕೆ ನೀರು ಬಂದಿದೆ. ಸುಮಾರು ಮೂರು-ನಾಲ್ಕು ಅಡಿಗಳಷ್ಟು ನೀರು ತುಂಬಿಕೊಂಡಿದೆ.

ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement