ಮಳೆ : ದಕ್ಷಿಣ ಕನ್ನಡ ಜಿಲ್ಲೆ ಶಾಲೆ-ಪಿಯು ಕಾಲೇಜುಗಳಿಗೆ ಬುಧವಾರ( ಜುಲೈ 31) ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಬುಧವಾರ (ಜುಲೈ 31 )ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಬುಧವಾರ (ಜುಲೈ 31 ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement