ಗುರುವಾರ (ಆಗಸ್ಟ್‌ 1) ಉತ್ತರ ಕನ್ನಡ ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಗುರುವಾರ (ಆಗಸ್ಟ್‌ 1) ಉತ್ತರ ಕನ್ನಡ ಜಿಲ್ಲೆಯ ಆರು ತಾಲೂಕಿನ ಶಾಲೆ-ಪಿಯು ಕಾಲೇಜ್‌ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಜೋಯೊಡಾ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಗುರುವಾರ (ಆಗಸ್ಟ್‌ 1) ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಪ್ರಕರಣ : ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement