ಮಂಗಳೂರು : ವಿದ್ಯಾರ್ಥಿನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು ; ಎಮರ್ಜೆನ್ಸಿ ಸೈರನ್ ಹಾಕಿಕೊಂಡು ಬಸ್ಸನ್ನು ಆಸ್ಪತ್ರೆಗೆ ಒಯ್ದು ಜೀವ ಉಳಿಸಿದ ಚಾಲಕ…!

ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಚಾಲಕ ಬಸ್ಸನ್ನು ಅಂಬ್ಯುಲೆನ್ಸ್ ರೀತಿಯಲ್ಲಿ ಓಡಿಸಿ ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ.
ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ ಹೆಸರಿನ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಿಗೆ ಹಠಾತ್‌ ತೀವ್ರವಾದ ಎದೆನೋವೊ ಕಾಣಿಸಿಕೊಂಡು ಹೃದಯಾಘಾತದ ಲಕ್ಷಣಗಳು ಕಾಣಿಸಿವೆ.
ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ ಮತ್ತು ಕಂಡಕ್ಟರ್ ಮಹೇಶ ಪೂಜಾರಿ ಅವರು ಪ್ರಯಾಣಿಕರ ಬಸ್ ಅನ್ನೇ ತುರ್ತು ವಾಹನವನ್ನಾಗಿ ಪರಿವರ್ತಿಸಿದರು.

ಬಸ್​​ನಲ್ಲಿದ್ದ ಎಮರ್ಜೆನ್ಸಿ ಸೈರನ್ ಹಾಕಿಕೊಂಡು ಎಲ್ಲಾ ಪ್ರಯಾಣಿಕರ ಸಮೇತ ಅವರು ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆ ಆವರಣದೊಳಕ್ಕೇ ಕೊಂಡೊಯ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಆಕೆಯ ಜೀವ ಉಳಿಸಿದ್ದಾರೆ. ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.
ಸಂದರ್ಭವನ್ನು ಅರಿತುಕೊಂಡು ತಕ್ಷಣವೇ ಬಸ್ಸನ್ನು ಆಸ್ಪತ್ರೆಯತ್ತ ಚಲಾಯಿಸಿ ವಿದ್ಯಾರ್ಥಿಯನ್ನು ಕ್ಯಾಶುವಾಲಿಟಿ ವಾರ್ಡ್ ಗೆ ಸೇರಿಸಿದರು. ಹೀಗಾಗಿ ವಿದ್ಯಾರ್ಥಿಯನ್ನು ರಕ್ಷಿಸಲು ಸಾಧ್ಯವಾಯಿತು. ಅದೇರೀತಿ ಪ್ರಯಾಣಿಕರು ಸಹ ಅವರಿಗೆ ಸಹಕಾರ ನೀಡಿದರು. ಪರಿಣಾಮವಾಗಿ ವಿದ್ಯಾರ್ಥಿಯ ಜೀವ ಉಳಿಯಿತು. ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಗೆ ಮತ್ತು ಮಾನವೀಯತೆಗೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರಮುಖ ಸುದ್ದಿ :-   ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement