ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಮಳೆ ಹೆಚ್ಚಾಗುವ ಮುನ್ಸೂಚನೆ ನೀಡಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ, ಕಾಪು, ಕಾರ್ಕಳ, ಹೆಬ್ರಿಯ ಶಾಲಾ ಕಾಲೇಜುಗಳಿಗೆ ಇಂದು, ಬುಧವಾರ (ಜುಲೈ 31)) ಆಯಾ ತಾಲೂಕುಗಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ