ಮಳೆ : ಇಂದು (ಜುಲೈ 31)ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಇಂದು ಬುಧವಾರ (ಜುಲೈ 31) ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

3 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement