ನಾಳೆ (ಆಗಸ್ಟ್ 2) ಉಡುಪಿ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 2) ಜಿಲ್ಲೆಯ ಶಾಲೆಗಳು- ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ   ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಶುಕ್ರವಾರ (ಆಗಸ್ಟ್ 2) ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೊಡ್ಡಬಳ್ಳಾಪುರ : ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಅಜ್ಜಿ, ಇಬ್ಬರು ಮೊಮ್ಮಕ್ಕಳು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement