ಲಿಂಗನಮಕ್ಕಿ ಜಲಾಶಯದಿಂದ 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಶಿವಮೊಗ್ಗ: ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಅತಿದೊಡ್ಡ ಜಲಾಶಯವಾದ ಲಿಂಗನಮಕ್ಕಿ ಅಣೆಕಟ್ಟು ಭರ್ತಿಯಾಗುತ್ತಿದ್ದು, ಗುರುವಾರ 3 ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು.
ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಸುಮಾರು 52 ಸಾವಿರ ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. ಅಣೆಕಟ್ಟಿನಲ್ಲಿ 1,814 ಅಡಿ ನೀರು ಸಂಗ್ರಹವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯ ಭರ್ತಿಯಾಗಲು ಇನ್ನೂ 5 ಅಡಿ ಬಾಕಿ ಇರುವಾಗಲೇ ಅಣೆಕಟ್ಟಿನಿಂದ ನದಿಗೆ ನೀರು ಬಿಡಲಾಗಿದೆ. ವಿದ್ಯುದಾಗಾರಕ್ಕೆ 5236 ಕ್ಯುಸೆಕ್ ಸೇರಿದಂತೆ ಜಲಾಶಯದಿಂದ ಸದ್ಯ 15,236 ಕ್ಯುಸೆಕ್ ನೀರು ಹೊರಗೆ ಬಿಡಲಾಗುತ್ತಿದೆ.

ನದಿಪಾತ್ರದ ಜನರಿಗೆ ಎಚ್ಚರಿಕೆ…
ಜಲಾಶಯದಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆ ‌ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ನೀರಿನ ಒಳಹರಿವಿನ ಆಧಾರದ ಮೇಲೆ ನೀರಿನ ಬಿಡುಗಡೆಯನ್ನು ಹೆಚ್ಚಿಸಲಾಗುತ್ತದೆ. ಗೇರುಸೊಪ್ಪ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯವು ಕಡಿಮೆ ಇರುವುದರಿಂದ ಲಿಂಗನಮಕ್ಕಿ ಜಲಾಶಯದಿಂದ ಹೆಚ್ಚುವರಿಯಾಗಿ ಹೊರಬಿಟ್ಟ ನೀರನ್ನು ಗೇರುಸೊಪ್ಪ ಜಲಾಶಯದಲ್ಲಿ ಸಂಗ್ರಹಿಸಲು ಅವಕಾಶವಿಲ್ಲ. ಆದ್ದರಿಂದ ಸುರಕ್ಷತೆಯ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ ಎಂದು ಅಣೆಕಟ್ಟಿನ ಕೆಳಭಾಗದಲ್ಲಿ ವಾಸಿಸುವ ಸಾರ್ವಜನಿಕರಿಗೆ ಪ್ರವಾಹ ಎಚ್ಚರಿಕೆ ಕುರಿತು ಕೆಪಿಸಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದರು.

ಪ್ರಮುಖ ಸುದ್ದಿ :-   ಭಾರಿ ಮಳೆ ಮುನ್ಸೂಚನೆ : ಜೂನ್ 16 ರಂದು ದ.ಕ. ಜಿಲ್ಲೆಯ 5 ತಾಲೂಕುಗಳೂ, ಉಡುಪಿ ಜಿಲ್ಲೆ ಎಲ್ಲ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement