ವೀಡಿಯೊ..| ಭಾರಿ ಮಳೆ : ಗೇರುಸೊಪ್ಪಾ ಜಲಾಶಯದಿಂದ ಶರಾವತಿ ನದಿಗೆ 51835 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ : ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಶರವಾತಿ ನದಿ ಕಣಿವೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿಗೆ ಗೇರುಸೊಪ್ಪ ಜಲಾಶಯದಿಂದ 51835 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.
ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹೀಗಾಗಿ ಗೇರುಸೊಪ್ಪಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಗೇರುಸೊಪ್ಪ ಜಲಾಶಯದಿಂದ 51835 ಸಾವಿರ ಕ್ಯೂಸೆಕ್ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

ಅಲ್ಲದೆ, ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಕ್ಕೆ ಬಿಡುತ್ತಿರುವದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಸಾರ್ವಜನಿಕರಿಗೆ ಜಲಾಶಯದ ಬಳಿ ತೆರಳದಂತೆ ಸೂಚಿಸಲಾಗಿದೆ.
ಜಲಾಶಯ ವ್ಯಾಪ್ತಿಯ 130 ಕುಟುಂಬಗಳನ್ನು ಈಗಾಗಲೇ ಸ್ಥಳಾಂತರಿಸಲಾಗುತ್ತಿದ್ದು, ಉಳಿದ ಕುಟುಂಬಗಳ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಲಾಗಿದೆ.

ಜಲಾಶಯದಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ‌ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ನೀರಿನ ಒಳಹರಿವಿನ ಆಧಾರದ ಮೇಲೆ ನೀರಿನ ಬಿಡುಗಡೆ ಪ್ರಮಾಣ ನಿರ್ಧರಿಸಲಾಗುತ್ತದೆ. ಗೇರುಸೊಪ್ಪ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯವು ಕಡಿಮೆ ಇರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ ಎಂದು ತಿಳಿಸಲಾಗಿದೆ. ಹೀಗಾಗಿ ಜಲಾಶಯದ ಕೆಳಗಿನ ನದಿಪಾತ್ರದಲ್ಲಿ ನೀರಿನ ಮಟ್ಟ ಹೆಚ್ಚಾಗಲಿದೆ. ಹೀಗಾಗಿ ಜನರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement