ಕೊಲ್ಲೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮನವಿ

ಕುಂದಾಪುರ: ಸಂಸದ ಬಿ.ವೈ. ರಾಘವೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದ್ದಾರೆ.
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಉದ್ಯಮಿ ವೆಂಕಟೇಶ ಕಿಣಿ ಅವರೊಂದಿಗೆ ಸಚಿವರನ್ನು ಭೇಟಿ ಮಾಡಿದ ಸಂಸದ ಬಿ.ವೈ. ರಾಘವೇಂದ್ರ ಅವರು, ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳು ಸೇರಿದಂತೆ ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಆದ್ದರಿಂದ ಬೈಂದೂರು ಮೂಕಾಂಬಿಕಾ ದೇವಸ್ಥಾನದ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಕ್ಕೆ ಸಮೀಪವಿರುವ ಒತ್ತಿನೆಣೆಯಲ್ಲಿ 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು, ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು
ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement