ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಸಾರಾಯಿ ಕುಡಿದ ಅಮಲಿನಲ್ಲಿ ಮಗ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಕೊಲೆಯಾದ ಮಹಿಳೆಯನ್ನು ಮಹಾದೇವಿ ಗುರಪ್ಪ ತೊಲಗಿ (70) ಎಂದು ಗುರುತಿಸಲಾಗಿದೆ. ಈಕೆಯ ಪುತ್ರ ಈರಣ್ಣ ಗುರಪ್ಪ ತೊಲಗಿ (34) ಕೊಲೆ ಆರೋಪಿಯಾಗಿದ್ದಾನೆ. ಈತ ಕುಡಿತದ ದಾಸನಾಗಿದ್ದ ಹಾಗೂ ಸಾರಾಯಿ ಕುಡಿದು ಬಂದು ತಾಯಿ ಹೆಸರಿನಲ್ಲಿರುವ ಒಂದು ಎಕರೆ ಜಮೀನನ್ನು ತನ್ನ ಹೆಸರಿಗೆ ಮಾಡಿಕೊಡು ಎಂದು ಪದೇ ಪದೇ ಜಮೀನು ವಿಚಾರವಾಗಿ ತಾಯಿಯೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಶನಿವಾರ ರಾತ್ರಿ ಸಹ ಇದೇ ವಿಚಾರಕ್ಕೆ ಗಲಾಟೆ ಮಾಡಿ ಮನೆಯಲ್ಲಿ ನೀರು ಕಾಯಿಸುವ ಒಲೆಯಲ್ಲಿದ್ದ ಅರ್ಧ ಸುಟ್ಟಿದ್ದ ಕಟ್ಟಿಗೆ ತೆಗೆದು ತಾಯಿಯ ತಲೆಗೆ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ತಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. . ಆರೋಪಿಯನ್ನು ಬಂಧಿಸಿರುವ ದೊಡವಾಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ