ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ವರದಿಯಾಗಿದೆ.
ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಎಂಬವರ ಶವ ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಎರಡು ತಿಂಗಳ ಹಿಂದೆಯಷ್ಟೇ ಅವರನ್ನು ಬೆಂಗಳೂರಿನ ಸಿಸಿಬಿ ವಿಭಾಗಕ್ಕೆ ವರ್ಗ ಮಾಡಲಾಗಿತ್ತು. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಕುಟುಂಬದವರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಶವವವನ್ನು ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ