ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಗೃಹಲಕ್ಷ್ಮಿ ಯೋಜನೆಯ ಜೂನ್-ಜುಲೈ ತಿಂಗಳ ಹಣ ಬಿಡುಗಡೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ

ಮಂಡ್ಯ : ರಾಜ್ಯ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ(Gruha Lakshmi Scheme) ಹಣ ಜಮಾ ಆಗಲು ವಿಳಂಬವಾಗಿತ್ತು. ಇದೀಗ ಆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಖಾತೆಗಳಿಗೆ ಜಮಾ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಇದೇ ಆಗಸ್ಟ್‌ ತಿಂಗಳಿಗೆ ಈ ಯೋಜನೆಗೆ ಒಂದು ವರ್ಷ ತುಂಬುತ್ತಿದೆ. ‘ಗೃಹ ಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ 2000 ರೂ. ಜಮೆ ಮಾಡಲಾಗುತ್ತದೆ. ಕಳೆದ 2023 ಆಗಸ್ಟ್ 30ರಂದು ಸರ್ಕಾರ ಯೋಜನೆಗೆ ಚಾಲನೆ ನೀಡಿತ್ತು. ಆದರೆ ಕಳೆದ ಎರಡು (ಜೂನ್, ಜುಲೈ) ತಿಂಗಳಿನಿಂದ ಹಣ ಜಮೆ ಆಗಿರಲಿಲ್ಲ ಎಂಬ ದೂರುಗಳು ಬಂದಿದ್ದವು.
ಈ ಕುರಿತು ಮಂಡ್ಯದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾರೂ ಆತಂಕ ಅಗತ್ಯವಿಲ್ಲ. ತಾಂತ್ರಿಕ ತೊಂದೆರಯಿಂದಾಗಿ ವಿಳಂಬವಾಗಿತ್ತು, ಈಗ ಅದನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ ಜೂನ್, ಜುಲೈ ತಿಂಗಳ ಹಣ ಜಮೆ ಆಗಿರಲಿಲ್ಲ. ಮುಂದಿನ ಒಂದೆರಡು ದಿನಗಳಲ್ಲಿ ಎರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಏಕಕಾಲಕ್ಕೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಗೂಗಲ್‌ ಲೆನ್ಸ್‌ ಬಳಸಿ ಪರೀಕ್ಷೆ ಬರೆದ ಆರೋಪ; ಗ್ರಾಮ ಆಡಳಿತ ಅಧಿಕಾರಿ ನೇಮಕ ಪರೀಕ್ಷೆ ರ‍್ಯಾಂಕ್ ಅಭ್ಯರ್ಥಿ ಪೊಲೀಸ್‌ ವಶಕ್ಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement