ಪ್ಯಾರಿಸ್: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳೆಯರ 50 ಕೆ.ಜಿ ಫ್ರೀ ಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಕ್ಯೂಬಾದ ಯುಸ್‌ನೈಲೆಸ್ ಗುಜ್ಮನ್ ಎದುರು ದಿಟ್ಟ ಪ್ರದರ್ಶನ ನೀಡಿದ ತೋರಿದ ವಿನೇಶ್ ಫೈನಲ್ ಪ್ರವೇಶಿಸಿದ್ದಾರೆ. ಕಳೆದೆರಡು ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್‌ನಲ್ಲೇ ನಿರ್ಮಿಸಿದ್ದ ವಿನೇಶ್ ಫೋಗಟ್ ಸೆಮಿ ಫೈನಲ್‌ನಲ್ಲಿ ಕ್ಯೂಬಾ ಕುಸ್ತಿಪಟು ಎದುರು ವಿನೇಶ್ 5-0 ಅಂತರದಲ್ಲಿ ಜಯಗಳಿಸುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ. ಇದರೊಂದಿಗೆ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಪ್ರಿಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಹಾಗೂ ವಿಶ್ವ ನಂ.1 ಕುಸ್ತಿಪಟುವಾಗಿದ್ದ ಜಪಾನಿನ ಯ್ಯೂ ಸುಸುಕಿ ವಿರುದ್ದ 3-2 ಅಂತರದಲ್ಲಿ ರೋಚಕ ಗೆಲುವು ಸಾಧಿಸಿದ್ದ ವಿನೇಶ ಫೋಗಟ್, ಕ್ವಾರ್ಟರ್ ಫೈನಲ್‌ನಲ್ಲಿ ಮೂರು ಬಾರಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಉಕ್ರೇನ್‌ನ ಒಕ್ಸಾನಾ ಲಿವೀಚ್ ವಿರುದ್ಧದ ತುರುಸಿನ ಪಂದ್ಯದಲ್ಲಿ 7-5 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸೆಮಿ ಫೈನಲ್ ಪ್ರವೇಶಿಸಿದ್ದರು. ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇದುವರೆಗೂ ಭಾರತದ ಶೂಟರ್‌ಗಳು ಮೂರು ಕಂಚಿನ ಪದಕ ಜಯಿಸಿದ್ದರು. ಇದೀಗ ಕುಸ್ತಿ ಮೂಲಕ ಮೊದಲ ಹಾಗೂ ಒಟ್ಟಾರೆ 4ನೇ ಪದಕ ಖಚಿತವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ