ಬಾಂಗ್ಲಾದೇಶ ಬಿಕ್ಕಟ್ಟು : ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಮಾಜಿ ನಾಯಕನ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ಅವರು ಸೋಮವಾರ ದೇಶದಿಂದ ನಿರ್ಗಮಿಸಿದ ನಂತರ ಬಾಂಗ್ಲಾದೇಶದಲ್ಲಿ ಉಂಟಾದ ಹಿಂಸಾಚಾರ ಮತ್ತು ಅರಾಜಕತೆಯ ನಡುವೆ, ಪ್ರತಿಭಟನಾಕಾರರು ಬಾಂಗ್ಲಾದೇಶದ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.
ಖುಲ್ನಾ ವಿಭಾಗದ ನರೈಲ್-2 ಕ್ಷೇತ್ರದ ಸಂಸದರಾಗಿರುವ ಮಶ್ರಫೆ ಬಿನ್ ಮೊರ್ತಜಾ ಅವರು ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್‌ನ ಅಭ್ಯರ್ಥಿಯಾಗಿ ಸತತ ಎರಡನೇ ಅವಧಿಗೆ ಆಯ್ಕೆಯಾಗಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಯ ಹಾಗೂ ಭುಗಿಲೆದ್ದ ಹಿಂಸಾಚಾರದ ನಡುವೆ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದ ನಂತರ ವಿಧ್ವಂಸಕರು ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಂಗ್ಲಾದೇಶದಲ್ಲಿ ನಡೆದ “ಹತ್ಯೆಗಳು ಮತ್ತು ವಿದ್ಯಾರ್ಥಿಗಳ ಸಾಮೂಹಿಕ ಬಂಧನಗಳ” ಬಗ್ಗೆ ಮೌನ ವಹಿಸಿದ್ದಕ್ಕಾಗಿ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ಸಂಸದ ಮೊರ್ತಜಾ ಅವರ ಮೇಲೆ ಪ್ರತಿಭಟನಾಕಾರರು ತಮ್ಮ ಕೋಪವನ್ನು ವ್ಯಕ್ತಪಡಿಸಿದರು. ಆಂದೋಲನಕಾರರು ಅವರ ಮನೆಯನ್ನು ಧ್ವಂಸಗೊಳಿಸಿದ್ದಾರೆ ಮತ್ತು ಬೆಂಕಿ ಹಚ್ಚಿದ್ದಾರೆಂದು ಫೋಟೋಗಳು ತೋರಿಸುತ್ತವೆ.
ಬಾಂಗ್ಲಾದೇಶ ತಂಡದ ಪರವಾಗಿ ಎಲ್ಲ ಸ್ವರೂಪದ 117 ಪಂದ್ಯಗಳಲ್ಲಿ ನಾಯಕತ್ವ ವಹಿಸಿರುವ ಮೊರ್ತಜಾ ಅವರು ತಮ್ಮ ರಾಷ್ಟ್ರಕ್ಕೆ ಅತ್ಯಧಿಕ-390 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು 36 ಟೆಸ್ಟ್, 220 ODIಗಳು ಮತ್ತು 54 T20 ಪಂದ್ಯಗಳಲ್ಲಿ 2,955 ರನ್ ಗಳಿಸಿದರು. ನಿವೃತ್ತರಾದ ನಂತರ, ಅವರು 2018 ರಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್‌ಗೆ ಸೇರಿದರು ಮತ್ತು ನರೈಲ್ -2 ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ...| ಹಾಸಿಗೆ, ಶೌಚಾಲಯ, ಮೈಕ್ರೋವೇವ್ ಒಲೆ, ಆಹಾರ ತಯಾರಿಕೆ...: ಅಮೆರಿಕದ ಬಿ-2 ಬಾಂಬರ್ ಯುದ್ಧ ವಿಮಾನ ಹಾರುವ ಹೋಟೆಲ್ ಕೂಡ ಹೌದು..!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement