
ಬೆಳಗಾವಿ: ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮಂಗಳವಾರ ರಾತ್ರಿ ಈ ಕಂಪನಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಕಂಪನಿಯಲ್ಲಿ ಸುಮಾರು 20 ರಷ್ಟು ಜನ ಇದ್ದರು ಎನ್ನಲಾಗಿದೆ.
ಇನ್ಸುಲೆನ್ ಟೇಪ್ ರೆಡಿ ಮಾಡುವ ಕಾರ್ಖಾನೆ ಇದಾಗಿದ್ದು, ಸ್ನೇಹಂ ಕಾರ್ಖಾನೆಯ ಲಿಫ್ಟ್‌ನಲ್ಲಿ ಮಂಗಳವಾರ(ಆಗಸ್ಟ್ 6) ರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಗೆ ವ್ಯಾಪಿಸಿದ್ದು, ಕಂಪನಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಒಳಗೆ ಇದ್ದವರ ಪೈಕಿ ಹಲವರು ಹೊರಗೆ ಓಡಿ ಬಂದು ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಒಳಗೆ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಚರಣೆ ನಡೆಸಿದ್ದಾರೆ.
ಬೆಳಗಾವಿಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡ ಇದೀಗ ಸ್ಥಳದಲ್ಲೇ ಮೊಕ್ಕಾಂ ಹೂಡಿದೆ. ಆರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.


ನಿಮ್ಮ ಕಾಮೆಂಟ್ ಬರೆಯಿರಿ