ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಇಂದು ಪ್ರಮಾಣವಚನ : ಸೇನಾ ಮುಖ್ಯಸ್ಥ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಗುರುವಾರ (ಆಗಸ್ಟ್ 8) ಪ್ರಮಾಣವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಘೋಷಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ವಾಕರ್‌, ಪ್ರಮಾಣ ವಚನ ಸಮಾರಂಭವು ರಾತ್ರಿ 8 ಗಂಟೆಗೆ (ಸ್ಥಳೀಯ ಕಾಲಮಾನ) ನಡೆಯುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ ಎಂದು ದ ಡೈಲಿ ಸ್ಟಾರ್ ವರದಿ ಮಾಡಿದೆ. ಅಂತಿಮ ವಿವರಗಳನ್ನು ಇನ್ನೂ ಅಂತಿಮಗೊಳಿಸಿಲ್ಲವಾದರೂ, ಮಧ್ಯಂತರ ಸರ್ಕಾರದ ಸಲಹಾ ಮಂಡಳಿಯು 15 ಸದಸ್ಯರನ್ನು ಒಳಗೊಂಡಿರಬಹುದು ಎಂದು ಸೇನಾ ಮುಖ್ಯಸ್ಥರು ಬಹಿರಂಗಪಡಿಸಿದ್ದಾರೆ. ದೇಶಾದ್ಯಂತ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸುತ್ತಿದೆ. ಇದು ರಾಷ್ಟ್ರದ ಸ್ಥಿರತೆಗೆ ಧನಾತ್ಮಕ ಸಂಕೇತವಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಂಗಳವಾರ (ಆಗಸ್ಟ್ 6) ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಸಂಸತ್ತನ್ನು ವಿಸರ್ಜಿಸಿದ್ದರು ಮತ್ತು ಮೊಹಮ್ಮದ್ ಯೂನಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದರು. ಅಧ್ಯಕ್ಷ ಶಹಾಬುದ್ದೀನ್ ಅವರು ಮೂರು ಸೇವೆಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿ ಆಂದೋಲನದ 13 ಸದಸ್ಯರ ನಿಯೋಗವನ್ನು ಬಂಗಬಾಬನ್ (ಅಧ್ಯಕ್ಷರ ಭವನ) ನಲ್ಲಿ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಹಮ್ಮದ್‌ ಯೂನಸ್ ಶೇಖ್ ಹಸೀನಾ ಅವರ ಆಡಳಿತ ತೆಗೆದುಹಾಕಿದ್ದನ್ನು ಸ್ವಾಗತಿಸಿದರು.
ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯು ಈ ಹಿಂದೆ 84 ವರ್ಷದ ಯೂನಸ್ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದೆ. ಯೂನಸ್ ಪ್ರಸ್ತುತ ದೇಶದಿಂದ ಹೊರಗಿದ್ದಾರೆ, ಆದರೆ ಶೇಖ್ ಹಸೀನಾ ಆಡಳಿತ ಕಿತ್ತುಹಾಕಿದ್ದನ್ನು ಸ್ವಾಗತಿಸಿದರು. ಈ ಬೆಳವಣಿಗೆ ದೇಶದ “ಎರಡನೇ ವಿಮೋಚನೆ” ಎಂದು ವಿವರಿಸಿದರು. ಯೂನಸ್ ಅವರು ಗ್ರಾಮೀಣ ಬ್ಯಾಂಕ್ ಮೂಲಕ ಬಡತನ ವಿರೋಧಿ ಅಭಿಯಾನಕ್ಕಾಗಿ 2006 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಮುಖ ಸುದ್ದಿ :-   ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ...!

 

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement