ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತಿದ್ದೇನೆ, ನನ್ನನ್ನು ಕ್ಷಮಿಸಿ.. : ಒಲಿಂಪಿಕ್ಸ್‌ ಅನರ್ಹತೆ ನಂತರ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್

ನವದೆಹಲಿ : ಪ್ಯಾರಿಸ್‌ನಲ್ಲಿ 2024 ರ ಒಲಿಂಪಿಕ್ಸ್‌ನಲ್ಲಿ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಒಂದು ದಿನದ ನಂತರ ಕುಸ್ತಿಪಟು ವಿನೇಶ್ ಫೋಗಟ್ ಗುರುವಾರ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.
50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ 100 ಗ್ರಾಂ ಅಧಿಕ ತೂಕದ ಕಾರಣದಿಂದ ಚಿನ್ನದ ಪದಕದ ಫೈನಲ್‌ ಪಂದ್ಯಕ್ಕೆ ವಿನೇಶ್ ಫೋಗಟ್‌ ಅನರ್ಹಗೊಂಡರು.
ನಿವೃತ್ತಿ ಘೋಷಿಸಿದ ಅವರು, ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ, “ಅಮ್ಮಾ, ಕುಸ್ತಿ ನನ್ನ ವಿರುದ್ಧ ಗೆದ್ದಿದೆ, ನಾನು ಸೋತಿದ್ದೇನೆ, ನನ್ನನ್ನು ಕ್ಷಮಿಸಿ, ನಿಮ್ಮ ಕನಸು ಮತ್ತು ನನ್ನ ಧೈರ್ಯ ಕುಗ್ಗಿಹೋಗಿದೆ. ನನ್ನಲ್ಲಿ ಈಗ ಯಾವುದೇ ಶಕ್ತಿ ಉಳಿದಿಲ್ಲ” ಎಂದು ಭಾವನಾತ್ಮಕವಾಗಿ ಹೇಳಿದ್ದಾರೆ. “ಕುಸ್ತಿಗೆ ವಿದಾಯ, 2001-2024 ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ವಿನೇಶ್ ಅವರು ತಮ್ಮ ಎದುರಾಳಿಯ ವಿರುದ್ಧ ಸೆಮಿಫೈನಲ್ ಪಂದ್ಯವನ್ನು 5-0 ಅಂತರದಿಂದ ಗೆದ್ದರು ಮತ್ತು ಒಲಿಂಪಿಕ್ಸ್ ಫೈನಲ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಆದಾಗ್ಯೂ, ಆಕೆ ಕೇವಲ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕಾಗಿ ಅಂತಿಮ ಪಂದ್ಯದಿಂದ ಅನರ್ಹಗೊಳಿಸಲ್ಪಟ್ಟರು, ಇದನ್ನು ಅನುಸರಿಸಿ ಅವರು ಕ್ರೀಡೆಗಾಗಿ ಇರುವ ಅಬ್ರಿಟ್ರೇಶನ್ ನ್ಯಾಯಾಲಯದಲ್ಲಿ (CAS) ಮೇಲ್ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ತನಗೆ ಬೆಳ್ಳಿ ಪದಕ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.
ಅವರು 2014, 2018 ಮತ್ತು 2022ರಲ್ಲಿ ಮೂರು ವಿಭಿನ್ನ ತೂಕ ವಿಭಾಗಗಳಲ್ಲಿ ಮೂರು ಕಾಮನ್‌ವೆಲ್ತ್ ಗೇಮ್ಸ್‌ಗಳಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

ವಿನೇಶ್ ಅವರು 2018 ರಲ್ಲಿ ಒಂದೇ ವರ್ಷದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರು 2019 ಮತ್ತು 2022 ರಲ್ಲಿ ಕ್ರಮವಾಗಿ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದಾರೆ.
ಹರಿಯಾಣದ 29 ವರ್ಷದ ಕುಸ್ತಿಪಟು ಮೂರು ಬಾರಿ ಒಲಿಂಪಿಯನ್ ಆಗಿದ್ದು, ಎಲ್ಲಾ ಮೂರು ಪಂದ್ಯಗಳಲ್ಲಿ ಮೂರು ವಿಭಿನ್ನ ತೂಕ ವಿಭಾಗಗಳಲ್ಲಿ ಸ್ಪರ್ಧಿಸಿದ್ದಾರೆ. ಅವರು 2016 ರ ರಿಯೊ ಒಲಿಂಪಿಕ್ಸ್‌ನಲ್ಲಿ 48 ಕೆಜಿ ಮಹಿಳಾ ಕುಸ್ತಿಯಲ್ಲಿ ಸ್ಪರ್ಧಿಸಿದ್ದರೆ, ಅವರು ಟೋಕಿಯೊದಲ್ಲಿ ನಡೆದ 2020 ರ ಒಲಿಂಪಿಕ್ಸ್‌ನಲ್ಲಿ 53 ಕೆಜಿ ಮಹಿಳಾ ಕುಸ್ತಿಯಲ್ಲಿ ಸ್ಪರ್ಧಿಸಿದರು ಮತ್ತು 2024 ರಲ್ಲಿ ಪ್ಯಾರಿಸ್‌ನಲ್ಲಿ ನಡೆದ 50 ಕೆಜಿ ಮಹಿಳಾ ಕುಸ್ತಿಯಲ್ಲಿ ಸ್ಪರ್ಧಿಸಿದರು.

ಪ್ರಮುಖ ಸುದ್ದಿ :-   ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement