ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಲಾಗಿದೆ.
ಶಾಸಕರು ಸಂಸದರ ವಿರುದ್ಧ ಕ್ರಿಮಿನಲ್‌ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಯಮಯಿ ಕೃಷ್ಣ ಎಂಬುವವರು ದೂರು ದಾಖಲಿಸಿದ್ದಾರೆ. ದೂರನ್ನು ಸ್ವೀಕರಿಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ.
ದಾಖಲೆಗಳ ಪರಿಶೀಲನೆಯ ಬಳಿಕ ಆಗಸ್ಟ್‌ 9 ಅಥವಾ 10 ರಂದು ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ಮಾಡಲಿದೆ. ಆ ಬಳಿಕ ಅಗತ್ಯವುದ್ದರೆ ಮುಖ್ಯಮಂತ್ರಿಸಿದ್ದರಾಮಯ್ಯ ಅವರಿಗೆ ನೋಟಿಸ್‌ ನೀಡುವ ಸಾಧ್ಯತೆ ಇದೆ.
ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಅವರು ಆರ್‌ಟಿಐ ಕಾರ್ಯಕರ್ತ ಎಂಬುದಾಗಿ ಗುರುತಿಸಿಕೊಂಡಿದ್ದಾರೆ. ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement