ಸಹಕಾರಿ ಕಾಯ್ದೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉತ್ತರ ಕನ್ನಡದ ಸಹಕಾರಿಗಳ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ಯಲ್ಲಾಪುರ: ರಾಜ್ಯ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ನೂತನ ಸಹಕಾರಿ ಕಾಯ್ದೆಯ ತಿದ್ದುಪಡಿ ವಿಧೇಯಕ ವಿರೋಧಿಸಿ ಕೃಷಿ, ಕೃಷಿಕ ಹಾಗೂ ಕೃಷಿಪತ್ತು ಸಂಘಗಳ ಶ್ರೇಯೋಭಿವೃದ್ಧಿ ಟ್ರಸ್ಟ್ ಶಿರಸಿ ಇದರ ಅಡಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಹಕಾರಿಗಳ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯಪಾಲರಿಗೆ ವಿಧೇಯಕದ ಬಾಧಕದ ಕುರಿತು ವಿವರಿಸಿದದ ನಿಯೋಗವು ರಾಜಕೀಯ ಲಾಭ ಪಡೆಯಲು ರಾಜ್ಯ ಸರ್ಕಾರವು ತರಾತುರಿಯಲ್ಲಿ ಸಹಕಾರಿ ಸಂಘ ಮತ್ತು ರೈತ ವಿರೋಧಿಯಾದ ಈ ವಿಧೇಯಕ ಪಾಸು ಮಾಡಿ ಜಾರಿಗೊಳಿಸಲು ಉದ್ದೇಶಿಸಿದೆ. ಸಹಕಾರಿ ಸಂಘವನ್ನು ರಾಜ್ಯ ಸರ್ಕಾರ ಈ ಕಾಯ್ದೆ ಮೂಲಕ ದುರುಪಯೋಗಪಡಿಸಿಕೊಳ್ಳಲು ಹವಣಿಸಿದ್ದು ರೈತ ವಿರೋಧಿ ಈ ಸಹಕಾರಿ ವಿಧೇಯಕ ಕೈಬಿಡುವಂತೆ ಮನವಿಯಲ್ಲಿ ಒತ್ತಾಯಿಸಿದೆ.

ಈ ಬಗ್ಗೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಿ ವಿಧೇಯಕ ಹಿಂಪಡೆಯುವಂತೆ ನಿಯೋಗ ಕೋರಿದ್ದು ರಾಜಪಾಲರು ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವದಾಗಿ ನಿಯೋಗಕ್ಕೆ ತಿಳಿಸಿದ್ದಾರೆ.
ನಿಯೋಗದಲ್ಲಿ ಯಡಳ್ಳಿ ಸೊಸೈಟಿ ಅಧ್ಯಕ್ಷ ಜಿ.ಆರ್.ಹೆಗಡೆ, ಬಿಸ್ಲಕೊಪ್ಪದ ಮಹೇಂದ್ರ ಭಟ್ಟ, ಹಿರಿಯ ಸಹಕಾರಿ ಕಳಚೆ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ ಕಳಚೆ, ಆನಗೋಡ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಗಣಪತಿ ಮಾನಿಗದ್ದೆ, ಮಾವಿನಮನೆ ಸಂಘದ ಅಧ್ಯಕ್ಷ ಸುಬ್ಬಣ್ಣ ಬೋಳ್ಮನೆ, ವಜ್ರಳ್ಳಿಯ ಸಹಕರಿ ಸಂಘದ ಅಧ್ಯಕ್ಷ ದತ್ತಾತ್ರಯ ಭಟ್ಟ ತಾರಗಾರ, ಟಿಎಂಎಸ್ ನಿರ್ದೇಶಕ ನರಸಿಂಹ ಕೋಣೆಮನೆ, ಹೈಕೋರ್ಟ್‌ ನ್ಯಾಯವಾದಿ ವಿನಾಯಕ ಭಟ್ಟ ಮತ್ತಿತರರು ಇದ್ದರು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

4 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement