ಹೊಸನಗರ : ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ : ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಹೊಸನಗರ ತಾಲೂಕಿನ ಮತ್ತಿಕೈ ಎಂಬಲ್ಲಿ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು, ನಂತರ ತಾನು ಕೂಡ ಬಾವಿಗೆ ಹಾರಿಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು ಬುಧವಾರ ರಾತ್ರಿ ನಡೆದಿದೆ.
ಚಂಪಕಾಪುರ ನಿವಾಸಿ ರಾಜೇಶ ಎಂಬವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು ಎಂದು ಗುರುತಿಸಲಾಗಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಮೃತದೇಹವನ್ನು ಬಾವಿಯಿಂದ ಎತ್ತಲಾಗಿದ್ದು, ನಗರ ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ

ನಿಮ್ಮ ಕಾಮೆಂಟ್ ಬರೆಯಿರಿ

advertisement