ಕಾರು-ಗೂಡ್ಸ್‌ ವಾಹನ ಭೀಕರ ಅಪಘಾತ : ಇಬ್ಬರು ಸಾವು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಮುಧೋಳದ ರಾಕೇಶ ವಾಟಕರ್ (23), ಸೌರಭ ಕುಲಕರ್ಣಿ (22) ಎಂದು ಗುರುತಿಸಲಾಗಿದೆ. ಎರಡು ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕೋಡಿ ಡಿವೈಎಸ್ಪಿ ಗೋಪಾಲ ಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಪಿಎಸ್‌ಐ ರೂಪಾಲಿ ಸ್ಥಳಕ್ಕೆ ಭೇಟಿ ನೀಡಿದರು. ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement