ಬದಲಿ ನಿವೇಶನ ಕೋರಿ ಸಿದ್ದರಾಮಯ್ಯ ಬರೆದಿದ್ದ ‘ಪತ್ರ’ ಬಿಡುಗಡೆ ಮಾಡಿದ ಜೆಡಿಎಸ್‌…!

ಬೆಂಗಳೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿಯೂ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ.
ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರು ಬದಲಿ ನಿವೇಶನಕ್ಕೆ ಕೋರಿ ಬರೆದಿದ್ದಾರೆ ಎನ್ನಲಾದ ಪತ್ರವೊಂದನ್ನು ಹಂಚಿಕೊಳ್ಳುವ ಮೂಲಕ ಟಾಂಗ್‌ ನೀಡಿದೆ.
ಮಾಹಿತಿ ಹಕ್ಕು ಕಾಯ್ದೆಯಡಿ ಮೈಸೂರು ನಗರಾಭಿವೃದ್ಧಿ ಮಂಡಳಿಯಿಂದ ಪಡೆದ ಸಿದ್ದರಾಮಯ್ಯ ಅವರು ಬರೆದ ಈ ಪತ್ರವನ್ನು ಜೆಡಿಎಸ್‌ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹಂಚಿಕೊಂಡಿದೆ. “ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… ಎಂದು ಜೆಡಿಎಸ್‌ ಟೀಕಿಸಿದೆ.

“ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ. ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …? ಎಂದು ಎಂದು ಜೆಡಿಎಸ್‌ ಮಾತಿನಲ್ಲಿ ಕುಟುಕಿದೆ.

ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ… ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ ಸಮುದಾಯಕ್ಕೆ ವಂಚಿಸಿದ್ದೀರಿ, ಸುಳ್ಳುಗಳ ಮೇಲೆ ಸುಳ್ಳಗಳನ್ನು ಹೇಳುತ್ತಾ ನಾಡಿನ ಜನರಿಗೂ ನಂಬಿಕೆ ದ್ರೋಹ ಎಸಗಿದ್ದೀರಿ. ಇದೇನಾ ನಿಮ್ಮ ಶುದ್ಧವಾದ ರಾಜಕೀಯ ಜೀವನ ..? ಎಂದು ಜೆಡಿಎಸ್‌ ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ ನಿಮಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಉಳಿದಿಲ್ಲ. ಮೊದಲು ರಾಜೀನಾಮೆ ಕೊಟ್ಟು ನಿರ್ಗಮಿಸಿ ಎಂದು ಜೆಡಿಎಸ್‌ ಆಗ್ರಹಿಸಿದೆ.

ಪ್ರಮುಖ ಸುದ್ದಿ :-   ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement