ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ.
ಅವರು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಸೋಮವಾರ (ಆಗಸ್ಟ್‌ 12) ಆದೇಶ ಹೊರಡಿಸಿದ್ದಾರೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಆರು ರಂಗಾಐಣಗಳ ನಿರ್ದೇಶಕರ ಪಟ್ಟಿ…
ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ
ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು.
ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ.
ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.
ದಾವಣಗೆರೆಯ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ
ಕಾರ್ಕಳದ ಯಕ್ಷರಂಗಾಯಣದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement