ಬೆಂಗಳೂರು : ಹವಾಮಾನ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮುನ್ಸೂಚನೆ ನೀಡಿದೆ.
ಐಎಂಡಿ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಗುರುವಾರದವರೆಗೆ ಲಘು ಮಳೆಯಾಗಲಿದೆ, ನಂತರ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳು ಕೆಲವು ಜಿಲ್ಲೆಗಳಲ್ಲಿ ಆಗಸ್ಟ್ ೧೭ರ ವರೆಗೆ ಗುಡುಗು-ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಹಾಗೂ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದಾರೆ.
ಆಗಸ್ಟ್ 12ರಿಂದ 16ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ