ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿಯೂ ಬುಧವಾರ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೆ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಗಾಳಿಯ ವೇಗವು 30 ರಿಂದ 40 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಯಾದಗಿರಿ, ಕೋಲಾರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹೇಳಿದೆ..

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement