ಕರ್ನಾಟಕದ 17 ಜಿಲ್ಲೆಗಳಲ್ಲಿ ಎರಡು ದಿನ ಗುಡುಗು-ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಗದಗ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಕೊಡಗು, ಹಾಸನ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶನಿವಾರ ಬೆಂಗಳೂರು ನಗರ, ಕೊಡಗು, ಮೈಸೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿಯೂ ಎರಡು ದಿನ ಮಳೆಯಾಗಲಿದೆ. ಸಂಜೆ ಅಥವಾ ರಾತ್ರಿಯ ವೇಳೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂಬುದಾಗಿ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement