ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆಗೆ ಚುನಾವಣೆ ಘೋಷಣೆ ; ಅಕ್ಟೋಬರ್ 4 ರಂದು ಫಲಿತಾಂಶ

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ, ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುತ್ತದೆ. ಹರಿಯಾಣದ 90 ಕ್ಷೇತ್ರಗಳಿಗೆ ಅಕ್ಟೋಬರ್ 1ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯು 90 ಸ್ಥಾನಗಳಿಗೆ ನಡೆಯಲಿದೆ, ಅದರಲ್ಲಿ 73 ಸಾಮಾನ್ಯ ಕ್ಷೇತ್ರಗಳಾಗಿವೆ ಮತ್ತು 17 ಪರಿಶಿಷ್ಟ ಜಾತಿಗಳಿಗೆ (SC) ಮೀಸಲಾದ ಕ್ಷೇತ್ರಗಳಾಗಿವೆ.

ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಪ್ರಜಾಪ್ರಭುತ್ವ ಮರಳಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಚುನಾವಣೆ ನಡೆಸಲು ಮುಂದಾಗಿದೆ.
ಅಮರನಾಥ ಯಾತ್ರೆ ಮುಗಿದ ಮರುದಿನ ಆಗಸ್ಟ್ 20 ರೊಳಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ. ಜಮ್ಮು ಮತ್ತು ಕಾಶ್ಮೀರದ 90 ಕ್ಷೇತ್ರಗಳಲ್ಲಿ 74 ಸಾಮಾನ್ಯ ಮತ್ತು 16 ಮೀಸಲು (ಎಸ್‌ಟಿ – 9, ಎಸ್‌ಸಿ – 7) ಇದೆ. ಸುಮಾರು 87 ಲಕ್ಷ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದೆ, ಜಮ್ಮು ಕಾಶ್ಮೀರದಲ್ಲಿನ ಒಟ್ಟು ಮತಗಟ್ಟೆಗಳ ಸಂಖ್ಯೆ 11,838 ಎಂದು ಮುಖ್ಯ ಚುನಾವಣಾ ಆಯುಕ್ತ ಮುಖ್ಯಸ್ಥ ರಾಜೀವಕುಮಾರ ತಿಳಿಸಿದ್ದಾರೆ.
ಭೂಪ್ರದೇಶದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಂತರ ಮತ್ತು ಆಗಸ್ಟ್ 2019 ರಲ್ಲಿ ಅದರ ರಾಜ್ಯತ್ವವನ್ನು ಹಿಂತೆಗೆದುಕೊಂಡ ನಂತರ ಇದು ಜಮ್ಮು ಮತ್ತು ಕಾಶ್ಮೀರದ 90-ಸದಸ್ಯರ ವಿಧಾನಸಭೆಗೆ ಮೊದಲ ಚುನಾವಣೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ವಿಧಾನಸಭಾ ಚುನಾವಣೆಗಳು ನವೆಂಬರ್-ಡಿಸೆಂಬರ್ 2014 ರಲ್ಲಿ ನಡೆದಿತ್ತು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement