ಬೆಂಗಳೂರು : ಕರ್ನಾಟಕದಲ್ಲಿ ಆಗಸ್ಟ್ 16 ರಿಂದ ಎರಡನೇ ಹಂತದ ಮುಂಗಾರು ಆರಂಭವಾಗಿದೆ ಎಂದು ರಾಜ್ಯ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಐಎಂಡಿ (IMD) ಅಧಿಕಾರಿಗಳ ಪ್ರಕಾರ, ಒಂದು ವಾರಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಸಿಲಿಕಾನ್ ಸಿಟಿ, ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭವಿಷ್ಯ ನುಡಿದಿದೆ, ಜೊತೆಗೆ ಮಲೆನಾಡು ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಆಗಸ್ಟ್ 18ರಂದು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ವಿಜಯಪುರ, ಗದಗ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಭಾಗಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ
ಆಗಸ್ಟ್ 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಉಳಿದ ಭಾಗಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಉಳಿದ ಭಾಗಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ
ಆಗಸ್ಟ್ 20ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ, ವಿಜಯಪುರ ಮತ್ತು ಇತರ ಜಿಲ್ಲೆಗಳ ಹಲವೆಡೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಆಗಸ್ಟ್ 21ರಂದು ಕರಾವಳಿ ಕರನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 22ರಂದು ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 23ರಂದು ಕರಾವಳಿ ಕರ್ನಾಟಕದ ಬಹುತೇಕ ಎಲ್ಲೆಡೆ ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ


ನಿಮ್ಮ ಕಾಮೆಂಟ್ ಬರೆಯಿರಿ