ನರಗುಂದ | ಕೊಣ್ಣೂರು ಬಳಿ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು

ಗದಗ: ಸಾರಿಗೆ ಬಸ್‌ ಹಾಗೂ ಕಾರು ನಡುವೆ ಭೀಕರ್ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ 4 ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), ಐಶ್ವರ್ಯ (16) ಹಾಗೂ ವಿಜಯ (12) ಎಂದು ಗುರುತಿಸಲಾಗಿದೆ.
ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪುರ ಕಡೆಗೆ ಹೊರಟ್ಟಿದ್ದ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದೆ. ಈ ಕುಟುಂಬ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು ಎನ್ನಲಾಗಿದ್ದು, ಸ್ಥಳಕ್ಕೆ ನರಗುಂದ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಟುಂಬಸ್ಥರು ಕಾರಿನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement