ವೈದ್ಯೆ ಅತ್ಯಾಚಾರ-ಕೊಲೆ ಘಟನೆ : ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಮೇಣದಬತ್ತಿ ಹಚ್ಚಿ ಪ್ರತಿಭಟನಾ ಮೆರವಣಿಗೆ

ಬೆಳಗಾವಿ : ಅಮಾನುಷ ಅತ್ಯಾಚಾರ ಮತ್ತು ಕೊಲೆಗೆ ಬಲಿಯಾದ ಕೋಲ್ಕತ್ತಾ ವೈದ್ಯೆ ಕುಟುಂಬಕ್ಕೆ ನ್ಯಾಯ ದೊರೆಕಿಸಿಕೊಡುವಂತೆ ಒತ್ತಾಯಿಸಿ ದೇಶಾದ್ಯಂತ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಬೆಳಗಾವಿಯಲ್ಲೂ ಮಹಿಳಾ ಮೋರ್ಚಾದವರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ಬೆಳಗಾವಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಯನಾ ಭಸ್ಮೆ, ಬೆಳಗಾವಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಭಾಗ್ಯಶ್ರೀ ಕೋಕಿತಕರ್, ಪ್ರಿಯಾಂಕಾ ಅಜರೇಕರ ಸೇರಿದಂತೆ ಇತರ ಮಹಿಳಾ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಹಿಳಾ ಮೋರ್ಚಾ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ಬೆಳಗಾವಿ ಗ್ರಾಮೀಣ ಮಂಡಲದ ಅಧ್ಯಕ್ಷ ಧನಂಜಯ ಜಾಧವ ಉಪಸ್ಥಿತರಿದ್ದು ಬೆಂಬಲಿಸಿದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement