ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಜಿಗಣಿಯೊಂದರಲ್ಲೇ 5 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ.
ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ತರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಲಾಗಿದೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ​ ಗುಂಡೂರಾವ್, ಎರಡು ವಾರದಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿರುವ ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಿದೆ.

ಝೀಕಾ ವೈರಸ್​ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಝೀಕಾ ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಝಿಕಾ ವೈರಸ್ ದೃಢಪಟ್ಟರೆ, ಕುಟುಂಬದ ಸದಸ್ಯರ ರಕ್ತದ ಮಾದರಿಯನ್ನು ಲ್ಯಾಬ್ ಟೆಸ್ಟ್‌ಗೆ ಒಳಪಡಿಸಬೇಕು. ಮನೆಯ ಸುತ್ತಮುತ್ತಲಿನ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯವಾಗಿದೆ. ಆ ಪ್ರದೇಶದ ಒಂದು ಕಿಲೋ ಮೀಟರ್ ವ್ಯಾಪ್ತಿಯನ್ನು ಕಂಟೋನ್ಮೆಂಟ್ ವಲಯ ಎಂದು ಪರಿಗಣಿಸಲಾಗುತ್ತದೆ. ಝಿಕಾ ವೈರಸ್‌ ನಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಪ್ರಮುಖ ಸುದ್ದಿ :-   ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement