ಕರ್ನಾಟಕದಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಾದ್ಯಂತ ಮಳೆ  ಇಂದಿನಿಂದ (ಆಗಸ್ಟ್ 19) ಚುರುಕುಗೊಳ್ಳಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಮಂಗಳವಾರದಿಂದ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಆಗಸ್ಟ್ 21 ರವರೆಗೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement