ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ; ರಾಜ್ಯಪಾಲರಿಗೆ ʼಝಡ್‌ʼ ಕೆಟಗರಿ ಭದ್ರತೆ, ಬುಲೆಟ್ ಪ್ರೂಫ್ ಕಾರು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯು ರಾಜ್ಯಪಾಲರಿಗೆ ʼZʼ ಕೆಟಗರಿ ಭದ್ರತೆ ನೀಡಿದೆ. ಜೊತೆಗೆ ಬುಲೆಟ್ ಪ್ರೂಫ್ ಕಾರು ನೀಡಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಷ್ಟು ದಿನಗಳ ಕಾಲ ಇನೋವಾ ಕಾರಿನಲ್ಲಿ ಓಡಾಡುತ್ತಿದ್ದರು. ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯಲ್ಲಿ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಲ್ಲದೇ, ಬಾಂಗ್ಲಾದೇಶ ಪ್ರಧಾನಿಯಂತೆ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಕೆಲವರು ಹೇಳಿಕೆಗಳನ್ನು ನೀಡಿದ್ದರು.
ರಾಜ್ಯಪಾಲರ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಿಧಾನ ಪರಿಷತ್‌ ಐವನ್ ಡಿಸೋಜಾ ಅವರು, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ಥಾವರಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಕೆ ನೀಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಜೊತೆಗೆ ಕೆಲ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಎಚ್ಚರಿಕೆಯನ್ನೂ ನೀಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ ಒದಗಿಸಿದೆ. ರಾಜ್ಯಪಾಲರು ಆಗಸ್ಟ್ 29ರ ವರೆಗೆ ಎಲ್ಲ ಸಾರ್ವಜನಿಕ ಕಾರ್ಯಕ್ರಮ ಮುಂದೂಡಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement