ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್. ಮೋಹನ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಆಗಸ್ಟ್ 20ರಂದು ನಿರಾಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶಚಂದ್ರ ಶರ್ಮಾ ಅವರಿದ್ದ ಪೀಠ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ.
ಮೋಹನ ನಾಯಕ್ ವಿಚಾರಣೆ ಮುಂದುವರೆಯಲು ವಿಚಾರಣಾ ನ್ಯಾಯಾಲಯದೊಂದಿಗೆ ಸಹಕರಿಸುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ತಾನು ಬಯಸುವುದಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್ ವಿಶೇಷ ಅನುಮತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ವಿಚಾರಣೆಗೆ ಸಾಕಷ್ಟು ಸಮಯ ಹಿಡಿಯಬಹುದು ಎಂಬ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ 2023ರ ಡಿಸೆಂಬರ್‌ನಲ್ಲಿ ಮೀಹನ ನಾಯಕ್‌ಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಗೌರಿ ಅವರ ಸಹೋದರಿ ಕವಿತಾ ಲಂಕೇಶ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ