ಶಿರಸಿ ನಗರಸಭೆಯ ನೂತನ ಅಧ್ಯಕ್ಷರಾಗಿ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷರಾಗಿ ರಮಾಕಾಂತ ಭಟ್ಟ ಆಯ್ಕೆ

ಶಿರಸಿ: ಇಲ್ಲಿನ ನಗರಸಭೆಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡು ಸ್ಥಾನಗಳು ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷರಾಗಿ ರಮಾಕಾಂತ ಭಟ್ಟ ಜಯಗಳಿಸಿದ್ದಾರೆ.
ಶಿರಸಿ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಗುರುವಾರ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಅಧಿಕಾರಿಯೂ ಆಗಿರುವ ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಶರ್ಮಿಳಾ ಮಾದನಗೇರಿ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವನಿತಾ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ರಮಾಕಾಂತ ಭಟ್ಟ ಹಾಗೂ ಕಾಂಗ್ರೆಸ್‌ನ ದಯಾನಂದ ನಾಯ್ಕ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಪರಿಶೀಲನೆ, ವಾಪಸಾತಿ ಪ್ರಕ್ರಿಯೆಗಳು ಮುಗಿದ ನಂತರ ಸದಸ್ಯರು ಕೈ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಅಂತಿಮವಾಗಿ ಮರಾಠಿಕೊಪ್ಪ ವಾರ್ಡಿನ ಬಿಜೆಪಿಯ ಶರ್ಮಿಳಾ ಮಾದನಗೇರಿ 19 ಮತಗಳನ್ನು ಪಡೆದ ಅಧ್ಯಕ್ಷರಾಗಿ ಆಯ್ಕೆಯಾದರು. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವನಿತಾ ಶೆಟ್ಟಿ 12 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ತಾನಕ್ಕೆ ನಡೆದ ಮತದಾನದಲ್ಲಿ ಗಾಂಧಿನಗರ ವಾರ್ಡಿನ ಬಿಜೆಪಿಯ ರಮಾಕಾಂತ ಭಟ್ಟ 19 ಮತಗಳನ್ನು ಪಡೆದು ಆಯ್ಕೆಯಾದರು. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ದಯಾನಂದ ನಾಯ್ಕ 12 ಮತಗಳನ್ನು ಗಳಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement