
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ನಂತರ ಚಿಕ್ಕಣ್ಣ ಅವರು ದರ್ಶನ್ ಅವರನ್ನು ಭೇಟಿಯಾಗಿರುವುದು ಅವರಿಗೆ ವಿಚಾರಣೆಯ ಸಂಕಷ್ಟ ತಂದೊಡ್ಡಬಹುದು ಎಂದು ಹೇಳಲಾಗುತ್ತಿದೆ.
ಸಾಮಾನ್ಯವಾಗಿ ಪ್ರಕರಣ ತನಿಖಾ ಹಂತದಲ್ಲಿರುವಾಗ ಸಾಕ್ಷಿ ಹೇಳಿದ ವ್ಯಕ್ತಿಯು ಜೈಲಿನಲ್ಲಿರುವ ಆರೋಪಿಯನ್ನು ಭೇಟಿಯಾಗುವಂತಿಲ್ಲ. ಆದರೆ ಈಗ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಅವರು ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವಾಗಲೇ ದರ್ಶನ್ ಅವರನ್ನು ಭೇಟಿಯಾಗಿರುವುದು ಅವರಿಗೆ ಸೊಂಕಷ್ಟ ತರಬಹುದಾಗಿದೆ. ಹೀಗಾಗಿ ಶೀಘ್ರವೇ ಎಸ್‌ಐಟಿ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ದರ್ಶನ್ ಅವರನ್ನು ಭೇಟಿಯಾದ ಉದ್ದೇಶದ ಬಗ್ಗೆ ಚಿಕ್ಕಣ್ಣ ಅವರನ್ನು ಪೊಲೀಸರು ಪ್ರಶ್ನಿಸುವ ಸಾಧ್ಯತೆಯಿದೆ.



ನಿಮ್ಮ ಕಾಮೆಂಟ್ ಬರೆಯಿರಿ