ಕಾರ್ಕಳ : ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಕುಡಿಸಿ ಯುವತಿ ಮೇಲೆ ಅತ್ಯಾಚಾರ ; ಇಬ್ಬರ ಬಂಧನ

ಉಡುಪಿ: ಮದ್ಯದಲ್ಲಿ ಮಾದಕ ವಸ್ತುವನ್ನು ಸೇರಿಸಿ ಕುಡಿಸಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ಉಳಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿವೆ.
ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಎನ್ನಲಅಗಿದ್ದು, ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರಿಗೆ ಹೇಳಿ ಬಿಯರ್ ಬಾಟಲಿ ತರಿಸಿ ಅದರಲ್ಲಿ ಮಾದಕ ವಸ್ತು ಬೆರೆಸಿ ಕುಡಿಸಿದ್ದಾನೆ. ನಂತರ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಹೇಳಿದ್ದಲ್ಲಿಗೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ. ನಂತರ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಒಬ್ಬನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆ ಕಾರ್ಕಳ ಠಾಣೆಯ ಸಮೀಪ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದರು. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಈಗ ಮುಂದಾಗಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement