ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನು ಕೊಚ್ಚಿ ಕೊಂದ ಮಲತಂದೆ

ಬೆಂಗಳೂರು: ಇಬ್ಬರ ಹೆಣ್ಣುಮಕ್ಕಳನ್ನು ಮಲತಂದೆಯೇ ಬರ್ಬರವಾಗಿ ಮಚ್ಚಿನಿಂದ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾನಗರದ ಅಮೃತಹಳ್ಳಿ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವ ಉತ್ತರ ಭಾರತ (North India) ಮೂಲದ ಕುಟುಂಬವಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವತಃ ಮಲತಂದೆಯೇ ಸುಮಾರು 14 ಹಾಗೂ 16 ವರ್ಷದ ಹೆಣ್ಣು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸುಮಿತ್‌ ಕೊಲೆ ಮಾಡಿ ಪರಾರಿಯಾಗಿರುವ ಮಲತಂದೆ ಎಂದು ಹೇಳಲಾಗಿದೆ. ತಾಯಿ ಅನಿತಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮಲ ತಂದೆ ಸುಮಿತ್ ಫುಡ್ ಡಿಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ‌ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಂತಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಡಾಗ್ ಸ್ಕ್ವಾಡ್, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದ ಹೊರಬರಬೇಕಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement