ಬೆಂಬಲ ಬೆಲೆ ಯೋಜನೆಯಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ

ಬೆಂಗಳೂರು : ಹೆಸರು ಕಾಳು ಹಾಗೂ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ 8682 (MSP) ರೂ.ಗಳಂತೆ 2215 ಮೆಟ್ರಿಕ್‌ ಟನ್‌ ಹೆಸರುಕಾಳು ಖರೀದಿಸಲು ಅನುಮತಿ ನೀಡಿದೆ. ಅದೇ ರೀತಿ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಬೆಳೆಯನ್ನು ಕೇಂದ್ರ ಸರ್ಕಾರ ಈ ಯೋಜನೆ ಅಡಿ ಖರೀದಿಸಲಿದೆ ಎಂದು ತಿಳಿಸಿದ್ದಾರೆ..
ರಾಜ್ಯದಲ್ಲಿ ಹೆಸರು ಕಾಳು ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್‌ಗೆ 8,682 ರೂ. (MSP) ದರದಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಹೆಸರು ಕಾಳಿನ ಬೆಲೆ ಕುಸಿದು ರೈತರು ತೊಂದರೆ ಸಿಲುಕಿದ್ದು, ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿಂತಿದೆ. ಕೇಂದ್ರ ಸರ್ಕಾರ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರ ಹೆಸರುಕಾಳು ಬೆಳೆಯನ್ನು ಬೆಲೆ ಬೆಂಬಲ ಯೋಜನೆ (Price Support Scheme (PSS) ಅಡಿ ಖರೀದಿಗೆ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ಸೂರ್ಯಕಾಂತಿ ಬೆಳೆಯನ್ನು ಕೂಡ ಬೆಲೆ ಕನಿಷ್ಠ ಬೆಂಬಲ ಯೋಜನೆ ಅಡಿಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 13210 ಮೆಟ್ರಿಕ್‌ ಟನ್‌ ಸೂರ್ಯಕಾಂತಿಯನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲಿದೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಆಗಸ್ಟ್ 21ರಂದು ಕೇಂದ್ರಕ್ಕೆ ಪತ್ರ ಬರೆದು ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಅವರನ್ನು ಭೇಟಿ ಮಾಡಿ ರಾಜ್ಯದ ಹೆಸರಕಾಳು ಮತ್ತು ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೆ. ಇದಕ್ಕೆ ಸ್ಪಂದಿಸಿದ ಸಚಿವರು ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡುವಂತೆ ಸೂಚಿಸಿದರು. ಕೇಂದ್ರ ಸರ್ಕಾರ ಆಗಸ್ಟ್ 22ರಂದೇ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ ಎಂದು ಜೋಶಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement