ಶ್ರೀರಾಮ ಸೇನೆ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಶನಿವಾರ ತಡರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಗೋಕಾಕ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರವಿ ಪೂಜಾರಿ ಅವರ ದೇಹದ ನಾಲ್ಕೈದು ಕಡೆ ಚಾಕುವಿನಿಂದ ಇರಿಯಲಾಗಿದೆ. ಒಟ್ಟು ನಾಲ್ವರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ರವಿ ಅವರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ. ಗೋಕಾಕ ಪೊಲೀಸರು ಹಲ್ಲೆ ನಡೆಸಿದ ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement