
ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ ಮುಖ್ಯಮಂತ್ರಿಗಳಿಗೂ ಗೊತ್ತಿದೆ ಎಂದು ಹೇಳಿದರು.
ಕೇವಲ ಮುಡಾ ಅಷ್ಟೇ ಅಲ್ಲ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವೂ ಇದೆ. ಸಿದ್ದರಾಮಯ್ಯ ಅವರು ಮನೆಗೆ ಹೋಗುತ್ತಾರೆ, ಕಾಂಗ್ರೆಸ್ನಲ್ಲಿ ಹೊಸ ಮುಖ್ಯಮಂತ್ರಿ ಬರುತ್ತಾರೆ. ಹೀಗಾಗಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ತಮ್ಮ ಪರವಾಗಿದೆ ಎಂದು ಪದೇಪದೇ ಹೇಳುತ್ತಿದ್ದಾರೆ. ಆದರೆ ದೆಹಲಿಗೆ ಹೋಗಿ ಒಮ್ಮೆ ರಾಹುಲ್ ಗಾಂಧಿ ಭೇಟಿ ಮಾಡಿ ವಿವರಣೆ ನೀಡುತ್ತಾರೆ, ಮತ್ತೊಮ್ಮೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ವಿವರಣೆ ಕೊಡುತ್ತಾರೆ ಎಂದರು. . ಹೈಕಮಾಂಡ್ ಸಿಎಂ ಅವರ ಪರವಾಗಿದ್ದರೆ ಸಿದ್ದರಾಮಯ್ಯ ಅವರು ಯಾಕೆ ಪದೇ ಪದೇ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿಯಾಗುತ್ತಾರೆ ಎಂದು ಪ್ರಶ್ನಿಸಿದರು.



ನಿಮ್ಮ ಕಾಮೆಂಟ್ ಬರೆಯಿರಿ