ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ 5 ಎಕರೆ ಜಮೀನು ; ಇದು ಅಧಿಕಾರ ದುರುಪಯೋಗವಲ್ಲವೇ- ಲೆಹರ್‌ ಸಿಂಗ್ ಪ್ರಶ್ನೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಡಾ ಸೈಟ್ , ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಮಾರಾಟ ಮಾಡಲು ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈಗ ಬಿಜೆಪಿ ಸಂಸದ ಲಹರ್‌ ಸಿಂಗ್ (Lahar Singh)​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಭೂಮಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ನಡೆಸುತ್ತಿರುವ ಟ್ರಸ್ಟ್‌ಗೆ (ಸಿದ್ಧಾರ್ಥ ವಿಹಾರ ಟ್ರಸ್ಟ್) ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) 5 ಎಕರೆ ಭೂಮಿಯನ್ನು (ಒಟ್ಟು 45.94 ಎಕರೆ) ಮಂಜೂರು ಮಾಡಿರುವುದು ಬೆಳಕಿಗೆ ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ನಡೆಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಒಟ್ಟು 45.94 ಎಕರೆ ಜಾಗದಲ್ಲಿ ಐದು ಎಕರೆ ಮಂಜೂರು ಮಾಡಿರುವುದು ಬೆಳಕಿಗೆ ಬಂದಿದೆ.. ಬೆಂಗಳೂರು ಸಮೀಪದ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಪರಿಶಿಷ್ಟ ಜಾತಿ ಕೋಟಾದಡಿ ನಾಗರಿಕ ಸೌಲಭ್ಯಗಳಿಗಾಗಿ ನೀಡಲಾಗಿದೆ ಎಂದು ಲೆಹರ್‌ ಸಿಂಗ್‌ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಕುತೂಹಲಕಾರಿ ವಿಷಯವೆಂದರೆ ಸ್ವತಃ ಖರ್ಗೆ ಅವರು, ಅವರ ಪತ್ನಿ, ರಾಧಾಬಾಯಿ ಖರ್ಗೆ, ಅವರ ಅಳಿಯ ಮತ್ತು ಕಲಬುರ್ಗಿ ಸಂಸದ ರಾಧಾಕೃಷ್ಣ, ಪುತ್ರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ, ಮತ್ತೊಬ್ಬ ಮಗ ರಾಹುಲ್ ಖರ್ಗೆ ಮತ್ತು ಇತರರು ಟ್ರಸ್ಟಿಗಳಾಗಿದ್ದಾರೆ. ಇದು ಅಧಿಕಾರದ ದುರುಪಯೋಗ, ಸ್ವಜನಪಕ್ಷಪಾತ ಮತ್ತು ಹಿತಾಸಕ್ತಿ ಸಂಘರ್ಷವಲ್ಲವೇ ಎಂದು ಲೆಹರ್‌ ಸಿಂಗ್‌ ಪ್ರಶ್ನಿಸಿದ್ದಾರೆ.

ಕೆಐಎಡಿಬಿ ಭೂಮಿ ಪಡೆಯಲು ಖರ್ಗೆ ಕುಟುಂಬ ಯಾವಾಗ ಏರೋಸ್ಪೇಸ್ ಉದ್ಯಮಿಗಳಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಮಾರ್ಚ್ 2024ರಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಕೆಐಎಡಿಬಿ ಭೂಮಿ ಹಂಚಿಕೆಗೆ ಒಪ್ಪಿಗೆ ನೀಡಿದ್ದಾದರೂ ಹೇಗೆ? ಇದು ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಮತ್ತು ಸ್ವಹಿತಾಸಕ್ತಿ ಸಂಘರ್ಷವಲ್ಲವೇ ಎಂದು ಲೆಹರ್‌ ಸಿಂಗ್‌ ಪ್ರಶ್ನಿಸಿದ್ದಾರೆ. ಈ ಅಕ್ರಮ ಹಂಚಿಕೆಯ ವಿಷಯ ಆರ್‌ಟಿಐ ಕಾರ್ಯಕರ್ತನ ಮೂಲಕ ರಾಜ್ಯಪಾಲರ ಕಚೇರಿಗೂ ತಲುಪಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement