ಕರ್ನಾಟಕದಲ್ಲಿ ಸೆಪ್ಟೆಂಬರ್ 2ರ ವರೆಗೂ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್‌ 30ರ ವರೆಗೂ ಎಲ್ಲ ದಿನ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ನಂತರ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.
ಬೀದರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement