ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್​ ಜೈಲಿಗೆ ನಟ ದರ್ಶನ್​ ಸ್ಥಳಾಂತರ

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವ​ರನ್ನು ಇಂದು, ಗುರುವಾರ ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಈವರೆಗೆ ದರ್ಶನ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು ಬಿಗಿ ಭದ್ರತೆಯಲ್ಲಿ ಬಳ್ಳಾರಿಯ ಜೈಲಿಗೆ ಪೊಲೀಸ್​ ವಾಹನಗಳು ತೆರಳಿವೆ. ಬೆಳಗ್ಗಿನ ಜಾವ 4:30ಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಹೊರಟ ಪೊಲೀಸ್​ ವಾಹನ ಬೆಳಗ್ಗೆ ‌9:45ರ ಸುಮಾರಿಗೆ ಬಳ್ಳಾರಿ ಸೆಂಟ್ರಲ್ ಜೈಲು ತಲುಪಿದೆ. ದರ್ಶನ್ ಬಲಗೈಗೆ ಬ್ಯಾಂಡೇಜ್ ಕಟ್ಟಿಕೊಂಡಿದ್ದರು.
ಪೊಲೀಸ್​ ವಾಹನದಿಂದ ಇಳಿದ ದರ್ಶನ್ ಜೈಲು ಪ್ರವೇಶದ್ವಾರದ ಪ್ರವೇಶ ದ್ವಾರದ ಪುಸ್ತಕದಲ್ಲಿ ಸಹಿ‌ ಮಾಡಿದರು. ಆಂತರಿಕ ಭದ್ರತಾ ವಿಭಾಗದಲ್ಲಿ ತಪಾಸಣೆ ನಡೆಯಿತು. ನಂತರ ಜೈಲು ವೈದ್ಯಾಧಿಕಾರಿಗಳು ಅವರ ಆರೋಗ್ಯ ತಪಾಸಣೆ ನಡೆಸಿದ್ದು, ಬಳಿಕ ಹೈ-ಸೆಕ್ಯೂರಿಟಿ ಸೆಲ್​ಗೆ ಕಳುಹಿಸಲಾಯಿತು‌.
ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ, ಎಸ್ಪಿ ಶೋಭಾರಾಣಿ‌, ಜೈಲು ಅಧೀಕ್ಷಕಿ ಲತಾ ನೇತೃತ್ವದಲ್ಲಿ ಪೊಲೀಸರು ಜೈಲಿನೊಳಗಿನ ಎಲ್ಲಾ ಪರಿಸ್ಥಿತಿ ವೀಕ್ಷಿಸಿದರು.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ಆರೋಪಿ ದರ್ಶನಗೆ ರಾಜಾತಿಥ್ಯ ಸಿಗುತ್ತಿದ್ದ ಬಗ್ಗೆ ​ ಫೋಟೋ ವೈರಲ್ ಆದ​ ಬೆನ್ನಲ್ಲೇ ಆರೋಪಿಗಳನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲು ಬೆಂಗಳೂರು ನಗರದ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿತ್ತು. ನ್ಯಾಯಾಲಯದ ಆದೇಶದಂತೆ ಆರೋಪಿ ನಟ ದರ್ಶನ್​ ನನ್ನು ಗುರುವಾರ ಬಳ್ಳಾರಿಯ ಜೈಲ್​ಗೆ ಶಿಫ್ಟ್​ ಮಾಡಲಾಗಿದೆ

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement