
ಬೆಂಗಳೂರು : ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್, ಕಲಬುರಗಿ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ರಾಯಚೂರು ಜಿಲ್ಲೆಗಳಿಗೆ ಸೆಪ್ಟೆಂಬರ್ ೧ರಂದು ಯೆಲ್ಲೋ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗವೂ ೩೫-೪೫ ಕಿಮೀ ವರೆಗೆ ಇರಲಿದೆ ಎಂದು ತಿಳಿಸಲಾಗಿದೆ. ಹೀಗಾಗಿ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.



ನಿಮ್ಮ ಕಾಮೆಂಟ್ ಬರೆಯಿರಿ