ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜೂನಿಯರ್ ಎನ್‌ಟಿಆರ್ (Jr NTR) ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಜೂನಿಯರ್ ಎನ್ ಟಿಆರ್ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಪ್ರಾಣ, ಗರುಡ ದೇವರ ದರ್ಶನ ಪಡೆದರು.
ತಮ್ಮ ತಾಯಿ ಶಾಲಿನಿ ನಂದಮುರಿ ಅವರೊಂದಿಗೆ ಉಡುಪಿಗೆ ಆಗಮಿಸಿದ್ದ ಜ್ಯೂನಿಯರ್ ಎನ್‌ಟಿಆರ್ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರಿಂದ ಅನುಗ್ರಹ ಮಂತ್ರಾಕ್ಷತೆ, ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು. ಜೂನಿಯರ್ ಎನ್‌ಟಿಆರ್ ತಾಯಿ ಶಾಲಿನಿ ನಂದಮುರಿ ಮೂಲತಃ ಕುಂದಾಪುರದವರಾಗಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ